Advertisement

Mysore: ಸೆ. 5ಕ್ಕೆ ಮೈಸೂರು ಅರಮನೆಗೆ ಗಜಪಡೆ

11:30 PM Sep 02, 2023 | Team Udayavani |

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅರಮನೆಗೆ ಆಗಮಿಸುತ್ತಿರುವ ಗಜಪಡೆಗೆ ಸ್ವಾಗತ ಕಾರ್ಯಕ್ರಮವನ್ನು ಸೆ.  5ರಂದು ಮಧ್ಯಾಹ್ನ 12.01ರಿಂದ 12.51ರ ಅಭಿಜಿನ್‌ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಹಮ್ಮಿಕೊಳ್ಳಲಾಗಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ, ಮೈಸೂರು ಜಿಲ್ಲಾ ಉಸ್ತವಾರಿ ಸಚಿವ ಡಾ| ಎಚ್‌.ಸಿ.ಮಹದೇವಪ್ಪ  ಸ್ವಾಗತ ಕಾರ್ಯಕ್ರಮಕ್ಕೆ ಚಾಲನೆ ನೀಡು ವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌ ಭಾಗವಹಿಸುವರು. ಶಾಸಕ ಟಿ.ಎಸ್‌. ಶ್ರೀವತ್ಸ ಅಧ್ಯಕ್ಷತೆ ವಹಿಸುವರು.

Advertisement

Udayavani is now on Telegram. Click here to join our channel and stay updated with the latest news.

Next