ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಶಿಖರ್ ಧವನ್ ಪಡೆ ಸಜ್ಜಾಗಿದೆ. ಇಂದಿನ ಪಂದ್ಯವನ್ನೂ ಗೆದ್ದು ಸರಣಿ ವಶಪಡಿಸಿಕೊಳ್ಳುವ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾ ತಂಡವಿದ್ದರೆ, ರಾಂಚಿ ಪಂದ್ಯ ಗೆದ್ದು ಸರಣಿ ಸಮಬಲ ಮಾಡುವ ಪ್ಲ್ಯಾನ್ ನಲ್ಲದೆ ಭಾರತ.
ರಾಂಚಿಯಲ್ಲಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಎರಡೂ ತಂಡಗಳು ತಮ್ಮ ಆಡುವ ಬಳಗದಲ್ಲಿ ತಲಾ ಎರಡು ಬದಲಾವಣೆ ಮಾಡಿಕೊಂಡಿವೆ. ಆರ್ ಸಿಬಿ ಆಲ್ ರೌಂಡರ್ ಶಹಬಾಜ್ ಅಹಮದ್ ಅವರು ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಉಳಿದಂತೆ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಜಾಗ ಪಡೆದಿದ್ದಾರೆ. ಹಿಂದಿನ ಪಂದ್ಯದಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಋತುರಾಜ್ ಗಾಯಕ್ವಾಡ್ ಮತ್ತು ರವಿ ಬಿಷ್ಣೋಯ್ ಇಂದು ತಂಡದಿಂದ ಹೊರಬಿದ್ದಿದ್ದಾರೆ.
ಇದನ್ನೂ ಓದಿ:ಅಪ್ಪು ʼಗಂಧದ ಗುಡಿʼ ಮೆಚ್ಚಿದ ಮೋದಿ: ಅಶ್ವಿನಿ ಪುನೀತ್ ಕುಮಾರ್ ಟ್ವೀಟ್ ಗೆ ಪ್ರತಿಕ್ರಿಯೆ
ದ.ಆಫ್ರಿಕಾ ತಂಡದ ನಾಯಕ ತೆಂಬ ಬವುಮ ಮತ್ತು ಬೌಲರ್ ಶಂಸಿ ಅನಾರೋಗ್ಯದ ಕಾರಣದಿಂದ ಹೊರಗುಳಿದಿದ್ದಾರೆ. ಹೀಗಾಗಿ ಇಂದು ಕೇಶವ್ ಮಹರಾಜ್ ತಂಡದ ಚುಕ್ಕಾಣಿ ಹಿಡಿದಿದ್ದಾರೆ. ರೀಜಾ ಹೆಂಡ್ರಿಕ್ಸ್ ಮತ್ತು ಜಾರ್ನ್ ಫೋರ್ಚುಯಿನ್ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಭಾರತ: ಶಿಖರ್ ಧವನ್ (ನಾ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿ.ಕೀ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ: ಜಾನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿ.ಕೀ), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್(ನಾ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡ, ಅನ್ರಿಚ್ ನೋಕ್ಯಾ