Advertisement

ಎರಡನೇ ಹಂತಕ್ಕೆ ಇಂದು ಅಧಿಸೂಚನೆ

06:23 AM Mar 28, 2019 | Team Udayavani |

ಬೆಂಗಳೂರು: ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬೀಳಲಿದೆ. ಈ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಏ.4 ಕೊನೆ ದಿನವಾಗಿದ್ದು, ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

Advertisement

ನಾಮಪತ್ರ ವಾಪಸ್‌ ಪಡೆಯಲು ಏ.8 ಕೊನೆ ದಿನಾಂಕವಾಗಿದ್ದು, ಏ.23ಕ್ಕೆ ಮತದಾನ ನಡೆಯಲಿದೆ. ರಾಜ್ಯದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next