Advertisement

ದ್ವಿ. ಪಿಯುಸಿ: 78 ಕೇಂದ್ರಗಳಲ್ಲಿ ನಾಳೆ ಇಂಗ್ಲಿಷ್‌ ಪರೀಕ್ಷೆ

02:01 AM Jun 17, 2020 | Hari Prasad |

ಮಂಗಳೂರು: ಲಾಕ್‌ಡೌನ್‌ ಕಾರಣದಿಂದ ದ.ಕ. ಜಿಲ್ಲೆಯಲ್ಲಿ ಅಭ್ಯಸಿಸಿದ ಹೊರ ಜಿಲ್ಲೆಗಳ 6,322 ಮಂದಿ ವಿದ್ಯಾರ್ಥಿಗಳು ತಮ್ಮ ಸ್ವ ಜಿಲ್ಲೆಗಳಲ್ಲೇ ಗುರುವಾರ (ಜೂ. 18) ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಬರೆಯಲಿದ್ದಾರೆ. ಇದೇ ವೇಳೆ ಇತರ ಜಿಲ್ಲೆಗಳಲ್ಲಿ ಅಭ್ಯಸಿಸಿದ ದ.ಕ. ಜಿಲ್ಲೆಯ 46 ಮಂದಿ ದ.ಕ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

Advertisement

78 ಕೇಂದ್ರಗಳಲ್ಲಿ ಪರೀಕ್ಷೆ
ದ.ಕ.ದಲ್ಲಿ ಒಟ್ಟು 51 ಕೇಂದ್ರಗಳಲ್ಲಿ 33,264 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈಗ 6,322 ಮಂದಿ ಹೊರ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯಲಿರುವುದರಿಂದ 26,942 ಮಂದಿಯಷ್ಟೇ ದ.ಕ.ದಲ್ಲಿ ಬರೆಯಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 13,547 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊರ ಜಿಲ್ಲೆಗಳಿಂದ 160 ಮತ್ತು ಹೊರ ರಾಜ್ಯದಿಂದ ಓರ್ವ ವಿದ್ಯಾರ್ಥಿ ಆಗಮಿಸಲಿದ್ದಾರೆ. ಉಳಿದಂತೆ ಜಿಲ್ಲೆಯ 1,344 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದಾರೆ.

ಕೇರಳದಿಂದ 32 ಬಸ್‌
ಕೇರಳದಿಂದ 1,137 ವಿದ್ಯಾರ್ಥಿಗಳು ಆಗಮಿಸಲಿದ್ದು, ತಲಪಾಡಿಯಿಂದ ಬಳಿಯಿಂದ ಒಟ್ಟು 32 ಬಸ್‌ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಬೆಳಗ್ಗೆ 7.30ಕ್ಕೆ ತಲಪಾಡಿಯಲ್ಲಿರಬೇಕು ಎಂದು ತಿಳಿಸಲಾಗಿದೆ. ಗರಿಷ್ಠ 24 ವಿದ್ಯಾರ್ಥಿಗಳು ಉಭಯ ಜಿಲ್ಲೆಗಳ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ.

ಎಲ್ಲ ಪರೀಕ್ಷಾರ್ಥಿಗಳು ಮಾಸ್ಕ್ ಧರಿಸಿಯೇ ಬರಬೇಕೆಂಬ ಸೂಚನೆ ನೀಡಲಾಗಿದೆ. ಪ್ರತೀ ಕೋಣೆಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳು ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಅನಾರೋಗ್ಯವಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ಎಲ್ಲ ಕೇಂದ್ರಗಳಿಗೂ ಆರೋಗ್ಯ ಇಲಾಖೆಯಿಂದ ಓರ್ವ ವೈದ್ಯ ಅಥವಾ ನರ್ಸ್‌, ಓರ್ವ ಆರೋಗ್ಯ ಕಾರ್ಯಕರ್ತೆಯನ್ನು ನಿಯೋಜಿಸಲಾಗಿದೆ. ಪೊಲೀಸ್‌ ಬಂದೋಬಸ್ತ್ ಕಲ್ಪಿಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳ್ಳಲಿದೆ.

Advertisement

ಗೊಂದಲಕ್ಕೆ ಒಳಗಾಗದಿರಿ
ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲಗಳಾಗದಂತೆ ಇಲಾಖೆ ತಯಾರಿ ನಡೆಸಿದೆ. ಮೂಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಗಳ ಕೇಂದ್ರಗಳಲ್ಲಿ ಬರೆಯುವ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ನಿಶ್ಚಿಂತೆಯಿಂದ ಪರೀಕ್ಷೆ ಬರೆಯಬಹುದು.
– ವಿಷ್ಣುಮೂರ್ತಿ, ಜಂಟಿ ನಿರ್ದೇಶಕರು, ದ.ಕ. ಪಪೂ ಶಿಕ್ಷಣ ಇಲಾಖೆ

Advertisement

Udayavani is now on Telegram. Click here to join our channel and stay updated with the latest news.

Next