Advertisement
ದ.ಕ. ಜಿಲ್ಲೆಯಲ್ಲಿ ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆಗೆ 20,776 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, ಈ ಪೈಕಿ 20,650 ಮಂದಿ ಹಾಜರಾಗಿದ್ದಾರೆ. 126 ಮಂದಿ ಗೈರು ಹಾಜರಾಗಿದ್ದಾರೆ. ಅರೇಬಿಕ್ ಪರೀಕ್ಷೆಗೆ 191 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಎಲ್ಲ ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
Related Articles
Advertisement
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಕನ್ನಡ ಪರೀಕ್ಷೆಯಲ್ಲಿ ಶೇ.99.53ರಷ್ಟು ವಿದ್ಯಾರ್ಥಿಗಳು ಪಾಲ್ಗೊಂಡು, 44 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.
ಕನ್ನಡ ಪರೀಕ್ಷೆಗೆ 4,361 ಬಾಲಕರು, 5,028 ಬಾಲಕಿ ಯರು ಸೇರಿ 9,389 ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದರು. ಇದರಲ್ಲಿ 25 ಬಾಲಕರು, 19 ಬಾಲಕಿ ಯರು ಸೇರಿ 44 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 9,345 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಅಕ್ರಮ, ಡಿಬಾರ್ ನಡೆದಿಲ್ಲ. ಅಪರ ಡಿಸಿ ಮಮತಾ ದೇವಿ ಜಿ.ಎಸ್. ಸಹಿತ ಅಧಿಕಾರಿಗಳು ಪರೀಕ್ಷೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.