ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಗುರುವಾರ ಆರಂಭಗೊಳ್ಳಲಿದ್ದು, ಮಾ. 29ರ ವರೆಗೆ ನಡೆಯಲಿವೆ.
ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಒಟ್ಟು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಸುಗಮವಾಗಿ ನಡೆಯಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಪರೀಕ್ಷೆ ಕುರಿತು ಸಾಮಾಜಿಕ ತಾಣಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ವದಂತಿ, ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸುವ ಎಚ್ಚರಿಕೆಯನ್ನು ಸರಕಾರ ನೀಡಿದೆ.
1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದವರ ಮೇಲೆ ನಿಗಾ ಇರಿಸಲಾಗಿದೆ. ಪರೀಕ್ಷಾ ಕೇಂದ್ರಗಳು, ಭದ್ರತಾ ಕೊಠಡಿಗಳು, ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಮಂಡಳಿಯ ಕೇಂದ್ರ ಕಚೇರಿಯ ಮೇಲೆ ಸಿಸಿ ಕೆಮರಾ ಹಾಗೂ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.