Advertisement

ದ್ವಿತೀಯ ಪಿಯು ಪರೀಕ್ಷೆ ಸುಗಮ

03:28 PM Mar 02, 2018 | |

ವಿಜಯಪುರ: ಗುರುವಾರದಿಂದ ಆರಂಭಗೊಂಡಿರುವ ದ್ವಿತೀಯ ಪಿಯು ಪರೀಕ್ಷೆ ಜಿಲ್ಲೆಯಾದ್ಯಂತ 39 ಪರೀಕ್ಷಾ ಕೇಂದ್ರಗಳಲ್ಲಿ ಒಬ್ಬರೂ ಪರೀಕ್ಷಾರ್ಥಿಗಳು ನಕಲು ಅಕ್ರಮ ಎಸಗದೇ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದ್ದಾರೆ. ಪರಿಣಾಮ ಪರೀಕ್ಷೆಗಳು ಯಾವುದೇ ನಕಾರಾತ್ಮಕ ಘಟನೆಗಳಿಲ್ಲದೇ ಸುಗಮವಾಗಿ ನಡೆದವು. ಅರ್ಥಶಾಸ್ತ್ರ ಹಾಗೂ ಭೌತಶಾಸ್ತ್ರ ಪರೀಕ್ಷೆ ನಡೆದವು.

Advertisement

ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗಾಗಿ ಹಾಗೂ ನಕಲು ಮುಕ್ತ ಪರೀಕ್ಷಾ ವ್ಯವಸ್ಥೆಗಾಗಿ ಜಿಲ್ಲಾಡಳಿತ ಹಲವು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ಪರೀಕ್ಷಾ ಕೇಂದ್ರಗಳ ಸುತ್ತ ಈ ಹಿಂದೆ ಕಂಡು ಬರುತ್ತಿದ್ದ ನಕಲು ಪ್ರೋತ್ಸಾಹಕರ ದಂಡು ಕಂಡು ಬರಲಿಲ್ಲ. ಮತ್ತೂಂದೆಡೆ ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್‌ ಬಲ ಹಾಕಲಾಗಿತ್ತು.

ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ ಹೊರತಾಗಿ ಇತರರಿಗೆ ಪ್ರವೇಶ ನಿರ್ಬಂ ಧಿಸಿದ್ದರಿಂದ ಪರೀಕ್ಷೆಗಳು ಅತ್ಯಂತ ಶಿಸ್ತುಬದ್ಧವಾಗಿ ನಡೆದವು. 

ಅರ್ಥಶಾಸ್ತ್ರ ಪರೀಕ್ಷೆಗೆ ಬರೆಯಲು ಹೆಸರು ನೋಂದಣಿ ಮಾಡಿಸಿಕೊಂಡ 11,118 ಪರೀಕ್ಷಾರ್ಥಿಗಳಲ್ಲಿ 10,305 ಪರೀಕ್ಷೆಗೆ ಹಾಜರಾದರೆ, 813 ವಿದ್ಯಾರ್ಥಿಗಳು ಗೈರಾಗಿದ್ದರು. ಭೌತಶಾಸ್ತ್ರ ವಿಷಯದಲ್ಲಿ ಪರೀಕ್ಷೆ ಬರೆಯಲು 6969 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 6754 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 215 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಅಧಿಕಾರಗಳು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next