Advertisement

ಎ.28ರಿಂದ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ : ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

10:04 PM Apr 23, 2021 | Team Udayavani |

ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ 2020 -21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Advertisement

ಈ ಪರೀಕ್ಷೆಗಳು ಎ.28ರಿಂದ ಮೇ 18ರ ವರೆಗೆ ನಡೆಯಲಿದ್ದು, ಕಾಲೇಜು ಹಂತದಲ್ಲೇ ನಡೆಸುವಂತೆ ಪ್ರಾಂಶುಪಾಲರಿಗೆ ನಿರ್ದೇಶನ ನೀಡುವಂತೆ ಸುತ್ತೋಲೆಯಲ್ಲಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದೆ. ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು.

ಅವರಿಗೆ ಕೊರೊನಾ ಪರೀಕ್ಷೆಯ ವರದಿ ಕಡ್ಡಾಯವಲ್ಲ. ಆದರೆ ಥರ್ಮಲ್‌ ಸ್ಕ್ಯಾನಿಂಗ್‌ ಕಡ್ಡಾಯವಾಗಿದೆ.

ಈ ಮಾಹಿತಿಯನ್ನು ಎಲ್ಲ ವಿದ್ಯಾರ್ಥಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಪ್ರಾಂಶುಪಾಲರ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ :‘ವ್ಯಾಕ್ಸಿನ್ಸ್‌ ಫಾರ್‌ ಆಲ್’ ಲಸಿಕೆ ಅಭಿಯಾನಕ್ಕೆ ಕೈ ಜೋಡಿಸಿದ ವಾಟ್ಸ್‌ಆ್ಯಪ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next