Advertisement

ದ್ವೀತಿಯ ಪಿಯು ಆಂಗ್ಲ ಪರೀಕ್ಷೆ:  ವಿದ್ಯಾರ್ಥಿಗಳಿಗೆ ಥರ್ಮಲ್  ಸ್ಕ್ರೀನಿಂಗ್

03:44 PM Jun 18, 2020 | keerthan |

ಚಿಕ್ಕಬಳ್ಳಾಪುರ: ಕೋವಿಡ್-19 ಸೋಂಕಿನಿಂದ ಮುಂದೂಡಲಾಗಿದ್ದ ದ್ವೀತಿಯ ಪಿಯುಸಿ ‌ಆಂಗ್ಲ ಪರೀಕ್ಷೆ ಬರೆಯಲು ಇಂದು ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳ ಬಿಡಲಾಯಿತು.

Advertisement

ಜಿಲ್ಲೆಯ ಒಟ್ಟು 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಒಟ್ಟು 12,215 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮೂರು ದಿನಗಳ ಮುಂಚೆಯೇ ಪರೀಕ್ಷೆ ಬರೆಯಲಿರುವ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕೋವಿಡ್-19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಬೆಳಗ್ಗೆ 10.15 ರಿಂದ 1.30ರವರೆಗೂ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ 144 ಸೆಕ್ಷನ್ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next