Advertisement

ದ್ವಿತೀಯ ಪಿಯು ರಿಪೀಟರ್ಸ್ ಕೂಡಾ ಪರೀಕ್ಷೆ ಇಲ್ಲದೆ ಪಾಸ್: ಹೈಕೋರ್ಟ್ ಗೆ ವರದಿ ನೀಡಿದ ಸರ್ಕಾರ

12:59 PM Jul 05, 2021 | Team Udayavani |

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ‌ಪಿಯು ಪುನರಾವರ್ತಿತ (ರಿಪೀಟರ್ಸ್) ಅಭ್ಯರ್ಥಿಗಳಿಗೂ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂದು ಸರ್ಕಾರ ಹೈಕೋರ್ಟ್ ಗೆ ಹೇಳಿದೆ.

Advertisement

ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

ಇದನ್ನೂಓದಿ:ಬಿಎಸ್ ವೈ ಧೂಳಿಗೆ ಸಮನಿಲ್ಲದವರು ಟೀಕೆ ಮಾಡುತ್ತಿದ್ದಾರೆ: ಸೋಮಶೇಖರ್ ಫುಲ್ ಗರಂ

ಪುನರಾವರ್ತಿತ ಅಭ್ಯರ್ಥಿಗಳಿಗೆ ಶೇ. 35ರಷ್ಟು ಅಂಕ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರಸಕ್ತ ಸಾಲಿನಲ್ಲಿ 76 ಸಾವಿರ ಪುನರಾವರ್ತಿತ ಅಭ್ಯರ್ಥಿಗಳು ಇದ್ದಾರೆ ಎನ್ನಲಾಗಿದೆ.

ಕೋವಿಡ್ ಕಾರಣದಿಂದ ಈ ಬಾರಿ ಪಿಯುಸಿ ಅಂತಿಮ ಪರೀಕ್ಷೆ ರದ್ದು ಮಾಡಲಾಗಿದೆ. ದ್ವಿತೀಯ ಪಿಯುಸಿ ರೆಗ್ಯುಲರ್‌ ವಿದ್ಯಾರ್ಥಿಗಳನ್ನು ಅವರ ಪ್ರಥಮ ಪಿಯುಸಿ ಮತ್ತು ಎಸೆಸೆಲ್ಸಿ ಅಂಕಗಳ ಆಧಾರದಲ್ಲಿ ತೇರ್ಗಡೆ ಮಾಡಲಾಗಿದೆ. ಫಲಿತಾಂಶ ಇನ್ನಷ್ಟೇ ಪ್ರಕಟವಾಗಬೇಕಿದೆ. .

Advertisement
Advertisement

Udayavani is now on Telegram. Click here to join our channel and stay updated with the latest news.

Next