ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಮಂಗಳವಾರ ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದ್ದು, ಉತ್ತೀರ್ಣ ವಿದ್ಯಾರ್ಥಿಗಳ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಫಲಿತಾಂಶ ತಲುಪಲಿದೆ.
ಮಾ.4ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತು. ಕೋವಿಡ್ 19 ಹಿನ್ನೆಲೆಯಲ್ಲಿ ಮಾ.23ರ ಇಂಗ್ಲಿಷ್ ಪರೀಕ್ಷೆ ಮುಂದೂಡಲಾಗಿತ್ತು. ಜೂ. 18ರಂದು ಈ ಪರೀಕ್ಷೆಯನ್ನು ಎಲ್ಲ ಸುರಕ್ಷಾ ಕ್ರಮಗಳೊಂದಿಗೆ ನಡೆಸಲಾಗಿತ್ತು.
ರಾಜ್ಯ ಸರಕಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದ್ದರಿಂದ ಲಾಕ್‌ಡೌನ್‌ಗೂ ಮೊದಲೇ ಫಲಿತಾಂಶ ಘೋಷಣೆ ಮಾಡಲಿದೆ.
ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ಹಲವು ರೀತಿಯ ವದಂತಿಗಳು ಉಂಟಾಗಿದ್ದವು. ಈ ದೃಷ್ಟಿಯಿಂದ ಸೋಮವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿ, ಫಲಿತಾಂಶ ಘೋಷಣೆಯ ದಿನಾಂಕವನ್ನು ನಿರ್ಧರಿಸಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಫಲಿತಾಂಶ ಇಲ್ಲಿ ವೀಕ್ಷಿಸಿ: www.karresults.nic.in