Advertisement

PUC: ಆ.21ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

09:03 PM Aug 20, 2023 | Team Udayavani |

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ)ಯು ದ್ವಿತೀಯ ಪಿಯುಸಿ ಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಎರಡನೇ ಪೂರಕ ಪರೀಕ್ಷೆ ಸೋಮವಾರ (ಆ.21) ದಿಂದ ಪ್ರಾರಂಭಗೊಳ್ಳಲಿದೆ.

Advertisement

ಇದೇ ಮೊದಲ ಬಾರಿಗೆ ದ್ವಿತೀಯ ಪಿಯುನಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಏರ್ಪಾಟು ಮಾಡಲಾಗಿದ್ದು 1.20 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆಗಳು ಪ್ರತಿ ದಿನ ಬೆಳಗ್ಗೆ 10.15ರಿಂದ 12.30ರ ವರೆಗೆ ಮತ್ತು ಮಧ್ಯಾಹ್ನ 2.15ರಿಂದ ಸಂಜೆ 5.30ರ ವರೆಗೆ ಎರಡು ಪಾಳಿಯಲ್ಲಿ ನಡೆಸಲಿದೆ. ಮೊದಲ ದಿನ ಕನ್ನಡ ಮತ್ತು ಅರೇಬಿಕ್‌ ಪರೀಕ್ಷೆಗಳು ನಡೆಯಲಿವೆ. ಸೆ.2ರ ವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಮಂಡಳಿಯು ಪರೀಕ್ಷೆ ನಡೆಸಲು ಪ್ರಶ್ನೆಪತ್ರಿಕೆ, ಪರೀಕ್ಷಾ ಕೇಂದ್ರ, ಮೂಲ ಸೌಕರ್ಯ ಸೇರಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next