ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 30ರ ಒಳಗೆ ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಪ್ರಕಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು.
ಯಾರಿಗೂ ಅನ್ಯಾಯವಾಗದ ರಿತಿಯಲ್ಲಿ ಫಲಿತಾಂಶ ಬರಲಿದೆ. ತಜ್ಞರು ಸೂಚಿಸಿದ ಮಾನದಂಡದ ಮೇಲೆ ಫಲಿತಾಂಶ ನೀಡಲಾಗುತ್ತದೆ. ಓಂದು ವೇಳೆ ಯಾವುದೇ ವಿದ್ಯಾರ್ಥಿಗೆ ಫಲಿತಾಂಶ ತೃಪ್ತಿಯಾಗದೇ ಇದ್ದಲ್ಲಿ, ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.
ಇದನ್ನೂ ಓದಿ:ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್
ಕೋವಿಡ್ ಕಾರಣದಿಂದ ಈ ಬಾರಿ ರಾಜ್ಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಮತ್ತು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.