Advertisement
ಪರೀಕ್ಷಾ ಸಮಯದಲ್ಲಿ ನಡೆಯುವಂತಹ ಅಕ್ರಮ ಗಳನ್ನು ತಡೆಯುವ ಉದ್ದೇಶದಿಂದ ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ ಉಭಯ ಜಿಲ್ಲೆಗಳ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 27 ಮತ್ತು ದ.ಕ. ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಉಡುಪಿಯಲ್ಲಿ 15,100 ಮತ್ತು ದ.ಕ.ದಲ್ಲಿ 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪ್ರಶ್ನೆಪತ್ರಿಕೆ ವಿತರಿಸಲು, ಜಿಲ್ಲೆಯ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 8 ತಂಡಗಳನ್ನು ಉಡುಪಿ ಜಿಲ್ಲೆಯಲ್ಲಿ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಿಸುವ ಎಲ್ಲ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವೇಳಾಪಟ್ಟಿ ನಿಗದಿ
ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಮಾತ್ರ ಠೇವಣಿ ಮಾಡಲಾಗುವುದರಿಂದ ಪ್ರಶ್ನೆಪತ್ರಿಕೆ ವಿತರಣೆಗೆ ನಿಯೋಜಿಸಲಾದ ಆಯಾಯ ತಾಲೂಕುಗಳ ತಹಶೀಲ್ದಾರ್‌ಗಳು, ಶಿಕ್ಷಣ ಸಂಯೋಜಕರು, ರೂಟ್ ಆಫೀಸರ್‌ಗಳು, ಪ್ರಶ್ನೆಪತ್ರಿಕೆ ಸಾಗಾಟ ವಾಹನಗಳು, ಪೊಲೀಸ್ ಸಿಬಂದಿ ಕ್ಲಪ್ತ ಸಮಯಕ್ಕೆ ಜಿಲ್ಲಾ ಖಜಾನೆಯಲ್ಲಿ ಹಾಜರಿದ್ದು, ಪ್ರಶ್ನೆಪತ್ರಿಕೆಗಳನ್ನು ಪಡೆದು ವಿತರಿಸಲಿದ್ದಾರೆ. ಎಲ್ಲ ತಂಡಗಳಿಗೂ ಆಗಮನ ಮತ್ತು ನಿರ್ಗಮನ ಸಮಯಗಳ ವೇಳಾಪಟ್ಟಿಯನ್ನು ಈಗಾಗಲೇ ನಿಗದಿಪಡಿಸಲಾಗಿದೆ.
Related Articles
ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಮತ್ತು ಬಾರ್‌ಕೋಡ್ ರೀಡರ್‌ಗಳನ್ನು ಅಳವಡಿಸಲಾಗುತ್ತದೆ. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಅಂಚೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಲು ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜಾಗೃತ ತಂಡಗಳನ್ನು ನೇಮಿಸಲಾಗಿದೆ.
Advertisement
24*7 ಸಿಸಿಟಿವಿ ಕಣ್ಗಾವಲುಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಂದ ತೆಗೆಯುವುದನ್ನು ಮತ್ತು ವಿತರಿಸುವುದನ್ನು ಪರಿಶೀಲಿಸಲು ಜಿಲ್ಲಾ ಖಜಾನೆಯ ಒಳಗೆ ಮತ್ತು ಹೊರಗೆ 24ಗಿ7 ಸಿಸಿಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನು ವೀಕ್ಷಿಸಲು ಪರೀಕ್ಷೆಗಳು ಮುಕ್ತಾಯವಾಗುವ ವರೆಗೆ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಲ್ಲಿ 24ಗಿ7 ಮತ್ತು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಕಂಟ್ರೋಲ್ ರೂಂ ತೆರೆಯಲಾಗುತ್ತದೆ.
-ಭಗವಂತ ಕಟ್ಟೆಮನೆ ಉಪನಿರ್ದೇಶಕರು, ಉಡುಪಿ ಜಿಲ್ಲಾ ಪ.ಪೂ. ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕಣ್ಗಾವಲಿನಲ್ಲಿಯೇ ಪರೀಕ್ಷೆ ನಡೆಯಲಿದೆ. ಅಕ್ರಮಗಳು ಘಟಿಸದಂತೆ ವಾಹನಗಳಿಗೆ ಜಿಪಿಎಸ್ ಅಳವಡಿಕೆ, ಸಾಕಷ್ಟು ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ.
-ವಿಷ್ಣುಮೂರ್ತಿ, ಉಪ ನಿರ್ದೇಶಕರು ದ.ಕ. ಜಿಲ್ಲಾ ಪ.ಪೂ. ಶಿಕ್ಷಣ ಇಲಾಖೆ