Advertisement

ದ್ವಿತೀಯ ಪಿಯುಸಿ ಫಲಿತಾಂಶ; 8 ವಿದ್ಯಾರ್ಥಿಗಳು ಆತ್ಮಹತ್ಯೆ: ಹೆಚ್ ಡಿಕೆ ದಿಗ್ಭ್ರಮೆ

05:05 PM Jun 19, 2022 | Team Udayavani |

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಕಳವಳ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದಾರೆ.

Advertisement

ಅಂಕವೇ ಎಲ್ಲವೂ ಅಲ್ಲ. ಪಾಸು-ಫೇಲು ಸಾಮಾನ್ಯ, ಜೀವನದಲ್ಲೂ ಏಳುಬೀಳು ಇದ್ದೇ ಇರುತ್ತದೆ. ಕಡಿಮೆ ಅಂಕ ಬಂದವರು ಮುಂದಿನ ತರಗತಿಯಲ್ಲಿ ಉತ್ತಮ ಅಂಕ ಪಡೆಯಲು ಯತ್ನಿಸಬೇಕು. ಫೇಲಾದವರು ಪಾಸಾಗಲು ಶ್ರಮಿಸಬೇಕು. ಅದನ್ನು ಬಿಟ್ಟು ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ. ಅವನ್ನು ಧೈರ್ಯ, ಛಲದಿಂದ ಎದುರಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು & ಶಿಕ್ಷಣ ಇಲಾಖೆ ಮನದಟ್ಟು ಮಾಡಿಸಬೇಕು ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ವಿದ್ಯಾಭ್ಯಾಸದಲ್ಲಿ ಹಿಂದುಳಿದ ಅನೇಕರು ಉನ್ನತ ಸ್ಥಾನಗಳಿಗೆ ಹೋಗಿರುವ ಉದಾಹರಣೆಗಳು ನಮ್ಮ ಮುಂದೆ ಇವೆ. ಹೀಗಾಗಿ ಧೃತಿಗೆಡಬೇಕಿಲ್ಲ. ಪೋಷಕರು ಕೂಡ ಮಕ್ಕಳಿಗೆ ಧೈರ್ಯ ತುಂಬಬೇಕು, ಸೂಕ್ಷ್ಮ ಮನಸ್ಸಿನ ಅವರಿಗೆ ಅಕ್ಕರೆಯಿಂದ ಆತ್ಮಸ್ಥೈರ್ಯ ಮೂಡಿಸಬೇಕು.ಎಂದು ಸಲಹೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next