Advertisement

ಎರಡನೇ ಬಾರಿ ಹೈಕೋರ್ಟ್‌ ಮೆಟ್ಟಿಲೇರಿದ ರವಿ ಬೆಳಗೆರೆ 

07:15 AM Nov 23, 2017 | |

ಬೆಂಗಳೂರು: ಶಾಸಕರ ಹಕ್ಕು ಚ್ಯುತಿ ಆರೋಪ ಸಂಬಂಧ 1 ವರ್ಷ ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿರುವ ವಿಧಾನಸಭೆಯ ಹಕ್ಕು ಬಾಧ್ಯತಾ ಸಮಿತಿ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪತ್ರಕರ್ತರಾದ ರವಿಬೆಳೆಗೆರೆ ಹಾಗೂ ಅನಿಲ್‌ರಾಜ್‌ ಮತ್ತೂಮ್ಮೆ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಹಕ್ಕು ಬಾಧ್ಯತಾ ಸಮಿತಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಾದ ಮಂಡನೆಗೆ ಅವಕಾಶ ನೀಡದೇ ಏಕಪಕ್ಷೀಯವಾಗಿ ಜೈಲುಶಿಕ್ಷೆ ಹಾಗೂ ದಂಡ ವಿಧಿಸಿದೆ. 

Advertisement

ಈ ಪ್ರಕರಣದಲ್ಲಿ ದೂರುದಾರರೂ ಆಗಿರುವ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ ಸಮಿತಿಯ ಅಧ್ಯಕ್ಷರಾಗಿದ್ದು ವಿಚಾರಣೆ ನಡೆಸಿರುವುದು ನಿಯಮಬಾಹಿರ. ತಮ್ಮ ವಿರುದ್ಧದ ಆರೋಪಗಳು ಶಾಸಕರ ಹಕ್ಕು ಚ್ಯುತಿ ವ್ಯಾಪ್ತಿಗೆ ಒಳಪಡುವುದಿಲ್ಲ. ಹೈಕೋರ್ಟ್‌ ನಿರ್ದೇಶನದಂತೆ ಮತ್ತೂಮ್ಮೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಸಿದ್ದರೂ ಸಮಿತಿ ವಾದ ಮಂಡನೆಗೆ ಅವಕಾಶ ನೀಡಿಲ್ಲ. ಇದೀಗ ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಲಾಗಿದೆ. ಹೀಗಾಗಿ ಹಕ್ಕುಬಾಧ್ಯತಾ ಸಮಿತಿಯ ಆದೇಶ ರದ್ದುಗೊಳಿಸುವಂತೆ ಅರ್ಜಿದಾರರು ಕೋರಿದ್ದಾರೆ. ಈ ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next