ನವ ದೆಹಲಿ : ಕೋವಿಡ್ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರಬಹುದು ಆದರೇ, ಕೋವಿಡ್ ಸೋಂಕಿನ ಎರಡನೇ ಅಲೆ ಇನ್ನೂ ಮುಗದಿಲ್ಲವಾದ್ದರಿಂದ ಸಂಪೂರ್ಣವಾಗಿ ನಿಯಮಗಳನ್ನು ಸಡಿಲಿಕೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಇಂದು(ಶುಕ್ರವಾರ, ಜುಲೈ 2) ಹೇಳಿದೆ.
ಜೂನ್ 23 ರಿಂದ 29ರ ನಡುವೆ ದೇಶದ ಸುಮಾರು 71 ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ರೇಟ್ ಶೇಕಡಾ 10 ಕ್ಕಿಂತ ಹೆಚ್ಚು ವರದಿಯಾಗಿದೆ. ಹಾಗಾಗಿ ಸೋಂಕನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ನಿಯಮಗಳು ಸ್ವಲ್ಪ ಸಡಿಲಿಕೆಯಾಗಿವೆ ಎಂದ ಮಾತ್ರಕ್ಕೆ ಸೋಂಕು ಮುಗಿದಿದೆ ಎಂದು ಅರ್ಥವಲ್ಲ. ದೇಶದ ಪ್ರತಿಯೊಬ್ಬ ನಾಗರಿಕನೂ ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ತಿಳಿಸಿದೆ.
ಇದನ್ನೂ ಓದಿ : ಗೋವಾ : ಪಕ್ಷದ ಸಂಸದೀಯ ಮಂಡಳಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತದೆ : ಸಿ ಟಿ. ರವಿ
ಸರ್ಕಾರಗಳು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಕೋವಿಡ್ ಸೋಂಕಿನ ಬಗ್ಗೆ ಎಚ್ಚರಿಕೆಯಿಂದ ಇರುವುದು ಬಹಳ ಮುಖ್ಯ. ಸೋಂಕಿನ ಪ್ರಮಾಣ ಹೆಚ್ಚಾಗದಂತೆ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದೆ.
ಇನ್ನು, ಜೂನ್ 21ರಿಂದ ಪ್ರತಿ ದಿನ ಸರಾಸರಿ 50 ಲಕ್ಷ ಮಂದಿಗೆ ಲಸಿಕೆ ಹಾಕಲಾಗುತ್ತಿದೆ. ಇದುವರೆಗೆ ಒಟ್ಟು 34 ಕೋಟಿ ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ವಿವರ ನೀಡಿದೆ. ಲಸಿಕೆಯೊಂದೇ ಕೋವಿಡ್ ಸೋಂಕನ್ನು ಓಡಿಸಲು ಇರುವ ಒಂದೇ ಅಸ್ತ್ರ. ಎಲ್ಲಾ ನಾಗರಿಕರು ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ದೇಶದಿಂದ ಸೋಂಕನ್ನು ಓಡಿಸುವಲ್ಲಿ ಸಹಾಯ ಮಾಡಬೇಕು ಎಂದು ಹೇಳಿದೆ.
ಇದನ್ನೂ ಓದಿ : ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಜತೆ ಕಾರ್ಯನಿರ್ವಹಿಸಿದ್ದ ಕನ್ನಡದ ವಿಜ್ಞಾನಿ ಇನ್ನಿಲ್ಲ