ನವದೆಹಲಿ: ಕೋವಿಡ್ 19 ಸೋಂಕಿನ ಮೊದಲ ಅಲೆಯಲ್ಲಿ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದರು. ಇದೀಗ ಕೋವಿಡ್ 19 ಎರಡನೇ ಅಲೆಗೆ ಭಾರತದಲ್ಲಿ ಕೇವಲ ಎರಡು ತಿಂಗಳಲ್ಲಿ 22.7 ಲಕ್ಷ ಮಂದಿ ನಿರುದ್ಯೋಗಿಗಳಾಗಿದ್ದಾರೆ ಎಂದು ಭಾರತೀಯ ಆರ್ಥಿಕ ಮೇಲ್ವಿಚಾರಣೆ ಮುಖ್ಯಸ್ಥ ಮಹೇಶ್ ವ್ಯಾಸ್ ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಮಹಿಳೆಗೆ ಕೊಲೆ ಬೆದರಿಕೆ : 7 ಜನ ಆರೋಪಿಗಳ ಬಂಧನ
ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಲ್ಲಿ 22.7 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದಲ್ಲಿನ ಒಟ್ಟು ಉದ್ಯೋಗಗಳ ಸಂಖ್ಯೆ 400 ಮಿಲಿಯನ್. ಉದ್ಯೋಗದಲ್ಲಿದ್ದ ಈ 400 ಮಿಲಿಯನ್ ಜನರಲ್ಲಿ 22.7 ಮಿಲಿಯನ್ ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ವ್ಯಾಸ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಎಎನ್ ಐ ವರದಿ ಮಾಡಿದೆ.
ಕಳೆದ ವರ್ಷ ಕೋವಿಡ್ 19 ಸೋಂಕು ಹರಡಲು ಆರಂಭವಾದ ಬಳಿಕ ಅಂದಾಜು ಶೇ.97ರಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ವ್ಯಾಸ್ ಅವರು ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಚಿಂತಕರ ಚಾವಡಿಯ ನಿರುದ್ಯೋಗ ಪ್ರಮಾಣದ ಅಂದಾಜಿನ ಪ್ರಕಾರ ಮೇ ಅಂತ್ಯದ ವೇಳೆಗೆ ಶೇ.12ಕ್ಕೆ ಏರಿಯಾಗುವ ನಿರೀಕ್ಷೆ ಇದೆ ಎಂದು ವ್ಯಾಸ್ ವಿವರಿಸಿದ್ದು, ಇದರಿಂದ ಸುಮಾರು 10 ಮಿಲಿಯನ್ ಅಥವಾ ಒಂದು ಕೋಟಿ ಭಾರತೀಯರು ಉದ್ಯೋಗ ಕಳೆದುಕೊಂಡಿದೆ ಎಂದು ಸೂಚಿಸುತ್ತದೆ.
ರಾಷ್ಟ್ರೀಯ ಲಾಕ್ ಡೌನ್ ನಿಂದ 2020ರ ಮೇ ನಂತರ ದೇಶದಲ್ಲಿ ನಿರುದ್ಯೋಗದ ಪ್ರಮಾಣ ದಾಖಲೆಯ ಶೇ.23.5ಕ್ಕೆ ಏರಿಕೆಯಾಗಿತ್ತು. ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿತ್ತು ಎಂದು ಕೆಲವು ತಜ್ಞರು ಅಭಿಪ್ರಾಯ ಪಟ್ಟಿದ್ದು, ನಿರ್ಬಂಧಗಳಿಂದ ಸಂಭವಿಸಿದ ನಷ್ಟವನ್ನು ತುಂಬಿಸಿಕೊಳ್ಳಲು ರಾಜ್ಯ ಸರ್ಕಾರಗಳು ಹಂತ, ಹಂತವಾಗಿ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲು ರಾಜ್ಯ ಸರ್ಕಾರಗಳು ಮುಂದಾಗಿರುವುದಾಗಿ ವರದಿ ತಿಳಿಸಿದೆ.