Advertisement
ವಾರ್ಷಿಕ ಪರೀಕ್ಷೆ ಮಾದರಿಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಗೂ ಒಂದೇ ಪ್ರಶ್ನೆಪತ್ರಿಕೆ ನೀಡಿ, ರಾಜ್ಯಮಟ್ಟದಲ್ಲೇ ಮೌಲ್ಯಮಾಪನ ಮಾಡಿಸಲು ಇಲಾಖೆ ಚಿಂತನೆ ನಡೆಸಿತ್ತು. ಇದಕ್ಕೆ ಉಪನ್ಯಾಸಕರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು, ಪಿಯು ಉಪನ್ಯಾಕರು ಮತ್ತು ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳ ಸಭೆ ನಡೆಸಿ ಹಲವು ವಿಷಯಗಳನ್ನು ಚರ್ಚಿಸಲಾಗಿದೆ.
Related Articles
ಪರೀಕ್ಷಾ ನಿಯಮಗಳನ್ನು ಬದಲಾ ಯಿಸುವುದು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಯಾವ ರೀತಿಯ ಪರಿಸ್ಥಿತಿ ಇದೆ, ಕಾಲೇಜುಗಳಲ್ಲಿ ಎಷ್ಟರ ಮಟ್ಟಿಗೆ ಪಾಠಗಳಾಗಿವೆ ಮುಂತಾದ ವಿಷಯಗಳ ಕುರಿತು ಪರಿಶೀಲಿಸಲು ಬುಧವಾರ ಇಲಾಖೆ ಅಧಿಕಾರಿಗಳು, ಜಿಲ್ಲಾ ಉಪ ನಿರ್ದೇಶಕರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
Advertisement
ಪರೀಕ್ಷಾ ನಿಯಮಗಳನ್ನು ಬದಲಾಯಿಸುವಂತೆ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಪ್ರತಿನಿಧಿಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಇಲಾಖೆ ಮತ್ತು ಸರಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು.– ಆರ್. ಸ್ನೇಹಲ್,
ನಿರ್ದೇಶಕರು, ಪಿಯು ಇಲಾಖೆ