ಬೆಂಗಳೂರು: ನಗರದ ಕಾಡುಗೊಂಡನಹಳ್ಳಿ ಮತ್ತು ದೇವರ ಜೀವನ ಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಯ ತನಿಖೆ ಮುಂದುವರಿದಿದ್ದು, ಆಗಸ್ಟ್ 18ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಸೆಕ್ಷನ್ 144 ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ.
ಈ ಮೊದಲು ಆಗಸ್ಟ್ 16ರ ಅಂದರೆ ಇಂದು ಮುಂಜಾನೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಹೇರಲಾಗಿತ್ತು. ಆದರೆ ಇಂದು ಈ ನಿಷೇಧಾಜ್ಞೆಯನ್ನು ಮತ್ತೆ ಮುಂದುವರಿಸಿದ್ದು ಆಗಸ್ಟ್ 18ರ ಬೆಳಿಗ್ಗೆ 6 ಗಂಟೆಯವರೆಗೆ ಮುಂದುವರಿಸಲಾಗಿದೆ.
ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದಿತ ಪೋಸ್ಟ್ ಹಾಕುವವರಿಗೆ ಕಾದಿದೆ ಗಂಡಾಂತರ:ಬೊಮ್ಮಾಯಿ ಎಚ್ಚರಿಕೆ
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವ, ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ಪರಿಸ್ಥಿತಿ ಶಾಂತಾವಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 18ವರೆಗೂ ನಿಷೇಧಾಜ್ಞೆ ಇರಲಿದೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಸೆಕ್ಯುರಿಟಿ ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಎಲ್ಲಾ ರೀತಿಯ ಭದ್ರತೆ ನೀಡುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಅದರ ಜೊತೆಗೆ ಅವರ ಮನೆ ಬಳಿಯೂ ಸೂಕ್ತ ಭದ್ರತೆ ನೀಡಲಾಗುತ್ತದೆ ಎಂದರು.