Advertisement

ಕಲಬುರಗಿಯಲ್ಲಿ ಮಾ.25ರವರೆಗೆ ನಿಷೇಧಾಜ್ಞೆ ವಿಸ್ತರಣೆ: ಜಿಲ್ಲಾಧಿಕಾರಿ

11:13 AM Mar 27, 2020 | keerthan |

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಜಾರಿ ಸೆಕ್ಷನ್ 144ರಡಿ ನಿಷೇಧಾಜ್ಞೆಯನ್ನು ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.

Advertisement

ಕೊರೊನಾ ಹರಡುವಿಕೆ ನಿಯಂತ್ರಿಸಲು ಸಿಆರ್ ಪಿ‌ಸಿ ಕಾಯ್ದೆ 1973ರ ಕಲಂ 144ರನ್ವಯ‌ ಮಾ.19ರಿಂದ ನಿಷೇಧಾಜ್ಞೆ ಜಾರಿಯಲ್ಲಿದೆ. ರವಿವಾರ ರಾತ್ರಿ 8ಕ್ಕೆ ನಿಷೇಧಾಜ್ಞೆ ಮುಗಿಯುತ್ತಿತ್ತು.  ಇದನ್ನು ಈಗ ಮಾ.25ರ ರಾತ್ರಿ 8ರವರೆಗೂ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಪಡೆಯಲು ಯಾವುದೇ ತೊಂದರೆ ಇಲ್ಲ. ಆದರೆ, ಅನಾವಶ್ಯಕವಾಗಿ ಮನೆಯಿಂದ ಹೊರಬರಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next