ಬೆಂಗಳೂರು : ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರದಿಂದ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸುವುದಾಗಿ ತಿಳಿಸಿದೆ.
ಕೋವಿಡ್ ಸೋಂಕು ಹರಡುವುದನ್ನು ನಿಲ್ಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವ ಸರ್ಕಾರವು ನಗರದ ಸ್ವಿಮ್ಮಿಂಗ್ ಪೂಲ್, ಜಿಮ್, ಅಪಾರ್ಟ್ಮೆಂಟ್, ಪಾರ್ಟಿ ಹಾಲ್ ಗಳಿಗೆ ನಿರ್ಬಂಧ ಹೇರಿದೆ.
ಇನ್ನು ರಾಜ್ಯದಲ್ಲಿ ನಿನ್ನೆ ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಳವಾಗಿದ್ದು ಬರೋಬ್ಬರಿ 6150 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 45104 ಕ್ಕೆ ಏರಿಕೆಯಾಗಿತ್ತು.
Related Articles
ಇನ್ನು ಇಂದು ಒಂದೇ ದಿನ ರಾಜ್ಯದಲ್ಲಿ 39 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 12696ಕ್ಕೆ ಏರಿಕೆಯಾಗಿತ್ತು.