Advertisement

ಕೊರೊನಾ ಆತಂಕ: ಕಲಬುರಗಿಯಲ್ಲಿ ಸೆ.144 ನಿಷೇಧಾಜ್ಞೆ ಜಾರಿ, ಗುಂಪಿನಲ್ಲಿ ಓಡಾಡಿದರೆ ಕಠಿಣ ಕ್ರಮ

01:10 AM Mar 21, 2020 | keerthan |

ಕಲಬುರಗಿ: ಕೊರೊನಾ ಸೋಂಕು ಹರಡದಂತೆ ತಡೆಯಲು ಕಲಬುರಗಿ ಜಿಲ್ಲಾದ್ಯಂತ ಸೆಕ್ಷನ್ 144 ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Advertisement

ಸೋಂಕಿನ ಭೀತಿ ಹೆಚ್ಚಾಗುತ್ತಿದ್ದು, ಅಘೋಷಿತ ಬಂದ್ ವಾತಾವರಣ ಮುಂದುವರೆಸಲಾಗಿದೆ. ಆದರೂ ಕೆಲವರು ಗಂಭೀರತೆಯನ್ನು ಅರಿತುಕೊಳ್ಳುತ್ತಿಲ್ಲ. ಹೀಗಾಗಿ ಇಂದಿನಿಂದಲೇ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.‌

ಜನತೆ ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಅಗತ್ಯವಾದ ವಸ್ತುಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ.‌ ಆದರೆ, ಅನಗತ್ಯವಾಗಿ ಗುಂಪು-ಗುಂಪಾಗಿ ಓಡಾಟ ಕಂಡು ಬಂದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನಿನಡಿ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next