ಲಕ್ನೋ: ಕೋವಿಡ್ ಸೋಂಕು, ಕಾನೂನು ಸುವ್ಯವಸ್ಥೆ ಕಾಪಾಡು ನಿಟ್ಟಿನಲ್ಲಿ ಉತ್ತರಪ್ರದೇಶದ ಸಹರಾನ್ ಪುರ್ ಜಿಲ್ಲೆಯಲ್ಲಿ ರೈತರ ಮಹಾಪಂಚಾಯತ್ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ(ಫೆ,10, 2021) 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ರಾಮನ ಪೋಷಾಕು, ಸೀತೆ ಜತೆ ವನವಾಸ….ರಾಮಾಯಣಕ್ಕೆ ಟಾಲಿವುಡ್ ಪ್ರಿನ್ಸ್ ಗೆ ಬಿಗ್ ಆಫರ್
ಮುಂಬರುವ ಹಬ್ಬ, ಕೋವಿಡ್ ಸೋಂಕು, ಸಮಾಜಘಾತುಕ ಶಕ್ತಿಗಳ ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ಸಹರಾನ್ ಪುರ್ ನಲ್ಲಿ ಸೆಕ್ಷನ್ 144 ಅನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದಲ್ಲಿ ತಿಳಿಸಿದ್ದಾರೆ.
ಕಿಸಾನ್ ಮಹಾಪಂಚಾಯತ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಲಿದ್ದಾರೆ. ನಾನು ಇಂದು ಸಹರಾನ್ ಪುರ್ ನಲ್ಲಿ ಇದ್ದು ರೈತರ ಸಮಸ್ಯೆಗಳನ್ನು ಆಲಿಸುತ್ತೇನೆ ಮತ್ತು ಅವರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಪ್ರಿಯಾಂಕಾ ತಿಳಿಸಿದ್ದರು. ಬಿಜೆಪಿ ನೇತೃತ್ವದ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕಾಗಿದೆ ಎಂದು ಟ್ವೀಟ್ ಮಾಡಿದ್ದರು.
ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ನೂತನ ಕೃಷಿ ಕಾಯ್ದೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಕಳೆದ ನವೆಂಬರ್ 26ರಿಂದ ದೆಹಲಿ ಸೇರಿದಂತೆ ದೇಶದ ವಿವಿಧ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.