Advertisement
ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಪ್ರತಿಬಂಧಕ ಆಜ್ಞೆಯನ್ನು ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
Related Articles
Advertisement
ಯಾವುದೇ ವ್ಯಕ್ತಿಯ ಜಾತಿ/ಧರ್ಮ/ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕರಿಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಧೆ, ಬಂದೂಕು, ಚಾಕು, ಕೋಲು ಅಥವಾ ಲಾಠಿ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರೆ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಸಿಡಿಸುವುದು, ಯಾವುದೇ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆ ಉಂಟು ಮಾಡಬಹುದಾದ, ರಾಜ್ಯದ ಭದ್ರತೆ ಕುಗ್ಗಿಸಬಹುದಾದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥ ತಯಾರಿಸುವ, ಪ್ರದರ್ಶಿಸುವ ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.
ಇದನ್ನೂ ಓದಿ:ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸದರಿ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.
ಅಲ್ಲದೇ ಸದರಿ ಆದೇಶ ಉಲ್ಲಂಘಿಸಿದವರ ಮೇಲೆ ಕಾಯ್ದೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಪ್ರತಿಬಂಧಕಾಜ್ಞೆ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆಯ ಪರಿಸ್ಥಿತಿಯ ಅವಲೋಕನೆ ಮಾಡಿ, ಅವಶ್ಯವಿದ್ದಲ್ಲಿ ಮುಂದಿನ ವಿಸ್ತರಿಸುವ ಷರತ್ತಿಗೆ ಒಳಪಟ್ಟಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.