Advertisement

ಕೋವಿಡ್ 19 ಭೀತಿ: ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 (3) ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

09:27 AM Mar 19, 2020 | keerthan |

ಉಡುಪಿ: ಕೋವಿಡ್ -19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 144 (3) ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಗದೀಶ ಜಿ ಆದೇಶ ಹೊರಡಿಸಿದ್ದಾರೆ.

Advertisement

ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾಮೂಹಿಕ ವಿವಾಹಗಳು ಮತ್ತು ಯಾವುದೇ ಜನಸಂದಣಿ ಸೇರುವ ಕಾರ್ಯಕ್ರಮಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿರ್ಬಂಧಕಾಜ್ಞೆ ಹೊರಡಿಸಲಾಗಿದೆ.

ಮುಂದಿನ ಆದೇಶದವರೆಗೆ ಈ ಸೆಕ್ಷನ್ ಜಾರಿಯಲ್ಲಿದ್ದು, ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಉತ್ಸವ/ಜಾತ್ರೆಗಳಲ್ಲಿ ಕೇವಲ ಧಾರ್ಮಿಕ ಕೇಂದ್ರಗಳ ಸಿಬ್ಬಂದಿ ಮಾತ್ರ ಭಾಗವಹಿಸುವಂತೆ ಸೂಚಿಸಿದೆ. ಉತ್ಸವಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿದೆ. ದೇವರ ದರ್ಶನ ಹೊರತು ಉಳಿದ ಸೇವೆಗಳನ್ನು ರದ್ದು ಮಾಡಲಾಗಿದೆ. ದೇವಸ್ಥಾನಗಳಲ್ಲಿ ತಂಗಲು ಯಾರಿಗೂ ಅವಕಾಶವಿರುವುದಿಲ್ಲ.

ಜಿಲ್ಲೆಯಲ್ಲಿ ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಬೀಚ್/ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದುವೆ/ ನಿಶ್ಚಿತಾರ್ಥ ಸಮಾರಂಭಗಳನ್ನು ಹೆಚ್ಚಿನ ಜನರು ಸೇರದೆ  ಸರಳವಾಗಿ ಆಯೋಜಿಸಲು ಅದೇಶದಲ್ಲಿ ಸೂಚಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next