ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ನಡೆದ ಮೂರು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಐವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ. ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಈ ಎನ್ ಕೌಂಟರ್ ಗಳು ನಡೆದಿದೆ.
ಕುಲ್ಗಾಮ್ ನ ಜೊದಾರ್ ಪ್ರದೇಶದಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿತು. ಉಗ್ರರು ಸೇನೆಯೆಡೆಗೆ ಗುಂಡು ಹಾರಿದ ಬಳಿಕ ಸೇನೆ ಪ್ರತಿದಾಳಿ ನಡೆಸಿದ್ದು, ಇಬ್ಬರು ಲಷ್ಕರ್ ಎ ತೋಯ್ಬಾ ಉಗ್ರರನ್ನು ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ:ಹಿಮಾಚಲ ಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ನಿಧನ
ಪುಲ್ವಾಮಾದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮತ್ತೆ ಇಬ್ಬರ ಭಯೋತ್ಪಾದಕರನ್ನು ಕೊಂದು ಹಾಕಲಾಗಿದೆ. ಅದಲ್ಲದೆ ಹಂದ್ವಾರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವನನ್ನು ಹತ್ಯೆ ಮಾಡಲಾಗಿದೆ.
ಹಂದ್ವಾರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಹತ್ಯೆಯಾದ ಉಗ್ರನನ್ನು ಹಿಜ್ಬುಲ್ ಉಗ್ರ ಸಂಘಟನೆಯ ಮೆಹ್ರಾಜುದ್ದೀನ್ ಹಲ್ವಾಯಿ ಅಲಿಯಾಸ್ ಉಬೈದ್ ಎಂದು ಗುರುತಿಸಲಾಗಿದೆ.