Advertisement

ಅಲ್‌ ಬದ್ರ್ ನ 7 ಉಗ್ರರ ಬಂಧನ

10:02 PM Feb 12, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಯ ಯೋಧರು ಶನಿವಾರ ಉಗ್ರರ ಅಡಗು ತಾಣವೊಂದನ್ನು ಪತ್ತೆ ಹಚ್ಚಿದ್ದಾರೆ.

Advertisement

ಅಲ್‌-ಬದ್ರ್ ಉಗ್ರ ಸಂಘಟನೆಯ ನಾಲ್ವರು ಉಗ್ರರು ಹಾಗೂ ಅವರ ಸಂಪರ್ಕದಲ್ಲಿದ್ದ ಮೂವರನ್ನು ಬಂಧಿಸಲಾಗಿದೆ.

ಅಲ್‌ ಬದ್ರ್ ಸದಸ್ಯರು ಸೋಪೋರ್‌ನಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲು ಹೊಂಚು ಹಾಕಿರುವ ಮಾಹಿತಿಯನ್ನಾಧರಿಸಿ ಶೋಧ ಕಾರ್ಯ ನಡೆಸಲಾಗಿತ್ತು. ಸ್ಥಳದಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next