ಶ್ರೀನಗರ: ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಕುಪ್ವಾರದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಯಿಂದ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಒಂದು ವಾರದಲ್ಲಿ ಭದ್ರತಾ ಪಡೆಗಳು ವಿಫಲಗೊಳಿಸಿದ ಎರಡನೇ ಪ್ರಮುಖ ಒಳನುಸುಳುವಿಕೆ ಪ್ರಯತ್ನ ಇದಾಗಿದೆ.
ಕುಪ್ವಾರದ ಮಚ್ಚಲ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆಯ ಸಮೀಪದಲ್ಲಿ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಪಾಕ್ ಆಕ್ರಮಿತ ಕಾಶ್ಮಿರದಿಂದ ಭಾರತದ ಕಡೆಗೆ ನುಸುಳಲು ಯತ್ನಿಸುತ್ತಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:2024ರ ಐಪಿಎಲ್ ನಲ್ಲಿ ಧೋನಿ ಆಡುತ್ತಾರಾ?: ಮಹತ್ವದ ಮಾಹಿತಿ ನೀಡಿದ ಸಿಎಸ್ ಕೆ ಸಿಇಒ
ಭಯೋತ್ಪಾದಕರು ಭಾರತದ ಕಡೆಗೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದಾಗ ಗುಂಡಿನ ಚಕಮಕಿ ಆರಂಭವಾಯಿತು.
ಜೂನ್ 16 ರಂದು ಕುಪ್ವಾರ ಜಿಲ್ಲೆಯ ಜುಮಗುಂಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದರು.