ಶೋಫಿಯಾನ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನ ಹತ್ಯೆಗೈದ ಭದ್ರತಾ ಪಡೆ
09:37 AM Nov 28, 2019 | keerthan |
ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
Advertisement
ಮೃತಪಟ್ಟ ಉಗ್ರನನ್ನು ಇರ್ಫಾನ್ ಅಹಮದ್ ಎಂದು ಗುರುತಿಸಲಾಗಿದೆ.
ಉಗ್ರ ಇರ್ಫಾನ್ ಅಹಮದ್ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಗುಂಪಿನ ಸದಸ್ಯನಾಗಿದ್ದ ಎಂದು ತಿಳಿದು ಬಂದಿದೆ.ಇಲ್ಲಿನ ತೆಚ್ವಾರ ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಈ ಉಗ್ರನನ್ನು ಹೊಡೆದುರುಳಿಸಲಾಗಿದೆ.