Advertisement

ಉಳ್ಳಾಲ: ಚರಂಡಿಯಲ್ಲಿ ಸೆಕ್ಯುರಿಟಿ ಗಾರ್ಡ್‌ ಮೃತದೇಹ ಪತ್ತೆ

12:02 AM Dec 31, 2022 | Team Udayavani |

ಉಳ್ಳಾಲ :ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಕುಂಬಳೆ ನಿವಾಸಿ ಗಣೇಶ್‌ ಶೆಟ್ಟಿ (45) ಮೃತದೇಹ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಜಂಕ್ಷನ್‌ ಬಳಿಯ ಮಳೆನೀರು ಹರಿಯುವ ಚರಂಡಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವಾಹನ ಢಿಕ್ಕಿಯಾಗಿ ಅಪಘಾತ ಸಂಭವಿಸಿರುವ ಸಾಧ್ಯತೆಯ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್‌ ಶೆಟ್ಟಿ ಸಂಜೆ ವೇಳೆಗೆ ಹೊಟೇಲ್‌ನಲ್ಲಿ ಅಡುಗೆ ಸಹಾಯಕರಾಗಿ ದುಡಿಯುತ್ತಿದ್ದರು.

ದೇರಳಕಟ್ಟೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಣೇಶ್‌ ಶೆಟ್ಟಿ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದ್ದು, ತಲೆ ಭಾಗಕ್ಕೆ ಗಾಯಗಳಾಗಿವೆ.

ಅಪಘಾತದಲ್ಲಿ ಮೃತಪಟ್ಟರೋ ಅಥವಾ ಸಾವಿಗೆ ಯಾವುದೇ ಬೇರೆ ಕಾರಣದ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next