ವಾರಾಣಸಿ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿಯಲ್ಲಿ ಇರುವ ಹಿಂದೂ ದೇವರ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಸ್ಥಳೀಯ ಜಿಲ್ಲಾ ನ್ಯಾಯಾಲಯ ಸೋಮವಾರ (ಸೆ.12) ಸಂಜೆ ತನ್ನ ತೀರ್ಪನ್ನು ಪ್ರಕಟಿಸಲಿದೆ.
ಇದನ್ನೂ ಓದಿ:ದೊಡ್ಡ ಮೊತ್ತಕ್ಕೆ ಮಾರಾಟವಾಯಿತು ʼಪೊನ್ನಿಯಿನ್ ಸೆಲ್ವನ್ʼ ಡಿಜಿಟಲ್ ಸ್ಟ್ರೀಮಿಂಗ್ ಹಕ್ಕು
ಜ್ಞಾನವಾಸಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ಜಿಲ್ಲಾ ಕೋರ್ಟ್ ಆದೇಶ ನೀಡಲಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ವಾರಾಣಸಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಹಿಂದೂ ದೇವರ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಕೋರ್ಟ್ ಇಂದು ಆದೇಶ ನೀಡಲಿದೆ. 1991ರ ಪೂಜಾ ಕಾಯ್ದೆ ಪ್ರಕಾರ ನಮ್ಮ ಪರವಾಗಿ ಒಂದು ವೇಳೆ ತೀರ್ಪು ಬಂದರೆ ನಂತರ ನಾವು ಭಾರತೀಯ ಪುರಾತತ್ವ ಸರ್ವೇ ಮೊರೆ ಹೋಗುತ್ತೇವೆ ಎಂದು ವಕೀಲರಾದ ವಿಎಸ್ ಜೈನ್ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದನ್ವಯ ವಾರಾಣಸಿ ಜಿಲ್ಲಾ ಕೋರ್ಟ್ ಈ ಪ್ರಕರಣದ ವಾದ, ಪ್ರತಿವಾದವನ್ನು ಆಲಿಸಿದ ನಂತರ ಸೆಪ್ಟೆಂಬರ್ 12ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು.