ವಾರಾಣಸಿ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜಿಲ್ಲಾ ಕೋರ್ಟ್ ಸೋಮವಾರ (ಸೆಪ್ಟೆಂಬರ್ 12) ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.
ಇದನ್ನೂ ಓದಿ:ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ನಿಗೂಢ ನಾಪತ್ತೆ
ಅತ್ಯಂತ ಸೂಕ್ಷ್ಮವಾದ ಈ ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ಕೋರ್ಟ್ ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಕಳೆದ ತಿಂಗಳು ತೀರ್ಪನ್ನು ಸೆಪ್ಟೆಂಬರ್ 12ಕ್ಕೆ ಕಾಯ್ದಿರಿಸಿದ್ದರು.
ತೀರ್ಪು ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಾರಾಣಸಿಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದರು.
ಹೈಲೈಟ್ಸ್:
*ಕೇಸ್ ನ ವಿಚಾರಣೆ ನಡೆಸಬೇಕೋ ಅಥವಾ ಬೇಡವೇ ಎಂಬ ಬಗ್ಗೆ ಆದೇಶ
*ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್
*ಹಿಂದೂ ಅರ್ಜಿದಾರರಿಗೆ ಮೊದಲ ಹಂತದ ಗೆಲುವು
ಹೆಚ್ಚಿನ ಮಾಹಿತಿ ನಿರೀಕ್ಷಿಸಿ…