Advertisement

ಭೀಕರ ಕೊಲೆ : ಹೆಂಡತಿ, ಮಗಳನ್ನೇ ಕೊಂದ ಪಾಪಿ

10:10 AM Sep 23, 2021 | Team Udayavani |

ಸೇಡಂ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಹೆಂಡತಿ ಹಾಗೂ ಮಗಳನ್ನು ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಪಟ್ಟಣದ ವಿಶ್ವನಗರ ಬಡಾವಣೆಯಲ್ಲಿ ನಡೆದಿದೆ.

Advertisement

ಪಾನಿಪೂರಿ ವ್ಯಾಪಾರ ಮಾಡಿಕೊಂಡಿದ್ದ ಕಲಬುರಗಿ ನಿವಾಸಿ ದಿಗಂಬರ ಹಣಮಂತಪ್ಪ ಗಾಂಜಲಿ (47) ಕೊಲೆ ಮಾಡಿದ ಪಾಪಿ. ಈತ ತನ್ನ ಪತ್ನಿ ಜಗದೇವಿ ಗಂಡ ದಿಗಂಬರ (35) ಹಾಗೂ ಮಗಳು ಪ್ರಿಯಾಂಕಾ ದಿಗಂಬರ (11) ಇಬ್ಬರನ್ನೂ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಇದನ್ನೂ ಓದಿ:ಮಳೆಯಿಂದ ಮನೆ ಮೇಲ್ಛಾವಣಿ ಕುಸಿತ: ಪವಾಡದಂತೆ ಪ್ರಾಣಾಪಾಯದಿಂದ ಪಾರಾದ ವೃದ್ದೆ

ಕೆಲ ತಿಂಗಳುಗಳ ಹಿಂದೆಯಷ್ಟೇ ಕಲಬುರಗಿಯಿಂದ ಈ ಕುಟುಂಬ ಪಟ್ಟಣದಲ್ಲಿ ಬಂದು ನೆಲೆಸಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆ ಆರೋಪಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next