Advertisement

SUPREME COURT: ದೇಶದ್ರೋಹ- ಪಂಚ ಸದಸ್ಯರ ಪೀಠಕ್ಕೆ ಅರ್ಜಿ

09:21 PM Sep 12, 2023 | Team Udayavani |

ನವದೆಹಲಿ: ಭಾರತೀಯ ದಂಡ ಸಂಹಿತೆ(ಐಪಿಸಿ)ಯ ಅಡಿಯಲ್ಲಿ ವಸಾಹತುಶಾಹಿ ಕಾಲದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ಸುಪ್ರೀಂ ಕೋರ್ಟ್‌ ಶಿಫಾರಸು ಮಾಡಿದೆ.

Advertisement

ಐಪಿಸಿ ನಿಬಂಧನೆಗಳನ್ನು ಸಂಸತ್‌ ಮರುಪರಿಶೀಲಿಸುವ ಪ್ರಕ್ರಿಯೆಯಲ್ಲಿರುವುದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸದಂತೆ ಕೇಂದ್ರ ಸರ್ಕಾರ ಮಾಡಿದ್ದ ಮನವಿಯನ್ನು ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠವು ತಿರಸ್ಕರಿಸಿತು. ವಸಾಹತುಶಾಹಿ ಕಾಲದ ಕ್ರಿಮಿನಲ್‌ ಕಾನೂನುಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಐಪಿಸಿ, ಸಿಆರ್‌ಪಿಸಿ ಮತ್ತು ಇಂಡಿಯನ್‌ ಎವಿಡೆನ್ಸ್‌ ಆ್ಯಕ್ಟ್ ಅನ್ನು ಬದಲಿಸಲು ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಆ.11ರಂದು ಮಂಡಿಸಿತ್ತು. ಜತೆಗೆ ದೇಶದ್ರೋಹದ ಕಾನೂನನ್ನು ರದ್ದುಗೊಳಿಸುವುದು ಮತ್ತು ಅಪರಾಧದ ವ್ಯಾಖ್ಯಾನಗಳೊಂದಿಗೆ ಹೊಸ ನಿಬಂಧನೆಗಳನ್ನು ಪರಿಚಯಿಸಲು ಕೇಂದ್ರ ಮುಂದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next