Advertisement

ಡಾ| ಬಿ.ವಿ. ಶಿರೂರು ಅವರಿಗೆ “ಸೇಡಿಯಾಪು ಪ್ರಶಸ್ತಿ’

11:56 PM Jun 07, 2024 | Team Udayavani |

ಉಡುಪಿ: ಹಿರಿಯ ಸಾಹಿತಿ, ಸಂಶೋಧಕ ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲೂಕಿನ ಆಡೂರು ಗ್ರಾಮದ ಡಾ| ಬಿ.ವಿ. ಶಿರೂರು ಅವರು 2024ನೇ ಸಾಲಿನ “ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

Advertisement

ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣ, ಭಾಷಾ ಶಾಸ್ತ್ರ, ಕಥನ ಕಾವ್ಯ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ನೀಡುವ ಪ್ರಶಸ್ತಿಯು 10,000 ರೂ.ನಗದು, ಪ್ರಶಸ್ತಿ ಫ‌ಲಕವನ್ನು ಒಳಗೊಂಡಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್‌ ಶೆಟ್ಟಿ ತಿಳಿಸಿದ್ದಾರೆ.

ಡಾ| ಬಿ.ವಿ. ಶಿರೂರು 1966ರಿಂದ 1985ರ ವರೆಗೆ ನರೇಗಲ್‌ನ ಶ್ರೀ ಅನ್ನದಾನೀಶ್ವರ ಮಹಾವಿದ್ಯಾ ಲಯದಲ್ಲಿ ಅಧ್ಯಾಪಕರಾಗಿ, ಪ್ರವಾಚಕರಾಗಿ, ಪ್ರಾಚಾ ರ್ಯರಾಗಿ ಸೇವೆ ಸಲ್ಲಿಸಿದ್ದರು. 1985ರಲ್ಲಿ ಕರ್ನಾಟಕ ವಿ.ವಿ.ಯ ಕನ್ನಡ ಅಧ್ಯಯನ ಪೀಠದಲ್ಲಿ ಜೈನ ಸಾಹಿತ್ಯ ಪ್ರವಾಚಕರಾಗಿ ಸೇರಿ 1994ರಲ್ಲಿ ಪ್ರಾಧ್ಯಾಪಕರಾಗಿ 2001ರಲ್ಲಿ ನಿವೃತ್ತರಾದರು. ಹಳಗನ್ನಡ ವಚನ ಸಾಹಿತ್ಯ ಶಾಸನ ಸಂಸ್ಕೃತಿ, ಇತಿಹಾಸ, ಸಂಶೋಧನೆ, ಗ್ರಂಥ ಸಂಪಾದನೆ ಇತ್ಯಾದಿ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ಅವರು 200ಕ್ಕೂ ಹೆಚ್ಚು ಸಂಶೋಧನ ಲೇಖನಗಳು, 65ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next