ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಂಡುಬಂದಂತಹ ಕೋವಿಡ್-19 ಸೋಂಕಿತರ ಪೈಕಿ 8 ಜನರು ಚೇತರಿಕೆ ಕಂಡಿರುವುದರಿಂದ ಸಾರ್ವಜನಿಕರು ಭಯಪಡದೇ ಚೇತರಿಕೆ ಕಂಡ ವ್ಯಕ್ತಿಗಳನ್ನು ಸಾಮಾನ್ಯ ವ್ಯಕ್ತಿಗಳಂತೆ ನೋಡ ಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಜಿಲ್ಲೆಯ ಜನರಲ್ಲಿ ಮನವಿ ಮಾಡಿದರು. ನಗರದ ಜಿಪಂ ಸಭಾಂಗಣದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಾಗುತ್ತಿ ರುವುದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆರೋಗ್ಯದ ಮೇಲೆ ಕಾಳಜಿವಹಿಸಬೇಕು ಎಂದು ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 12 ಕೋವಿಡ್-19 ಸೋಂಕಿತರ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ ಓರ್ವ ಮಹಿಳೆ ಮೃತ ಪಟ್ಟಿದ್ದು ಮೊದಲೇ ಚೇತರಿಕೆಗೊಂಡ 3 ಮಂದಿ ಭಾನುವಾರ ಬೆಳಗ್ಗೆ 5 ಮಂದಿ ಆಸ್ಪತ್ರೆಯಿಂದ ಬಿಡು ಗಡೆಗೊಂಡಿದ್ದಾರೆ. ಉಳಿದ ಮೂರು ಜನ ಸೋಂಕಿತರ ಪೈಕಿ ಒಬ್ಬರು ಬೆಂಗಳೂರಿನಲ್ಲಿ ಹಾಗೂ ಇಬ್ಬರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
464 ವಾನಹ ಜಪ್ತಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ, ಏ.14 ರವ ರೆಗೆ ಲಾಕ್ ಡೌನ್ ಇರುತ್ತದೆ. ಅದನ್ನು ಜನರು ಪಾಲಿಸ ಬೇಕಾಗಿದೆ. ಇದುವರೆಗೆ ಅನಾವಶ್ಯಕವಾಗಿ ವಾಹನ ಗಳಲ್ಲಿ ರಸ್ತೆಯಲ್ಲಿ ಬಂದವರ 464 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲೆಯ
ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಕೊರಂಟೈನ್‌ನಲ್ಲಿ ನೇಮಕ ಮಾಡಿರುವಂತಹ ಸಿಬ್ಬಂದಿಗಳಿಗೆ ಸುರಕ್ಷಾ ಕವಚಗಳನ್ನು ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ ಉಪಸ್ಥಿತರಿದ್ದರು.