Advertisement

ಸೆ. 9ರವರೆಗೆ ಪ್ರವಾಸಿಗರು ಬರುವಂತಿಲ್ಲ: ಡೀಸಿ ಆದೇಶ

06:25 AM Sep 01, 2018 | |

ಮಡಿಕೇರಿ: ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಕೊಡಗಿಗೆ ಭೇಟಿ ನೀಡುವ ಪ್ರವಾಸಿಗರ ಮೇಲಿನ ನಿಷೇಧವನ್ನು ಜಿಲ್ಲಾಡಳಿತ ಸೆ.9ರ ವರೆಗೆ ವಿಸ್ತರಿಸಿದೆ. ಈ ಸಂಬಂಧ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಶುಕ್ರವಾರ ಮರು ಆದೇಶ ಹೊರಡಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದ ರಸ್ತೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್‌, ರೆಸಾರ್ಟ್‌, ಹೋಂಸ್ಟೇ ಹಾಗೂ ಇತರ ಖಾಸಗಿ ವಸತಿಗೃಹಗಳಲ್ಲಿ ಪ್ರವಾಸಿಗರ ಹಾಗೂ ಇತರ ಅತಿಥಿಗಳ ವಾಸ್ತವ್ಯವನ್ನು ಆ.31ರ ವರೆಗೆ ಕಡ್ಡಾಯವಾಗಿ ರದ್ದುಪಡಿಸುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ, ಜಿಲ್ಲೆಯಲ್ಲಿ ಈಗಲೂ ಮಳೆಯಾಗುತ್ತಿದ್ದು, ಹಾನಿಯಾದ ಪ್ರದೇಶ, ಮಾರ್ಗಗಳು ಪೂರ್ಣವಾಗಿ ದುರಸ್ತಿಯಾಗಿಲ್ಲ. ಅಲ್ಲದೆ, ಹಾನಿಗೊಂಡ ಪ್ರದೇಶಗಳಿಗೆ ಪ್ರವಾಸಿಗರು ಭೇಟಿ ನೀಡಿ, ತೊಂದರೆ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಇನ್ನೂ 7ದಿನಗಳ ಕಾಲ ನಿಷೇಧ ಹೇರುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕೋರಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸೆ. 9ರ ವರೆಗೆ ಪ್ರವಾಸಿಗರಿಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next