Advertisement
ವಿಚಾರಣ ನ್ಯಾಯಾಲಯ ನಿರೀಕ್ಷಣ ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ ಭವಾನಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿಯು ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಿದೆ.
ಮಾಧ್ಯಮಗಳಲ್ಲಿ ಬಂದಂತೆ ಎಸ್‌ಐಟಿ ನೀಡಿರುವ ನೋಟಿಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆಗಳನ್ನು ಉಲ್ಲೇಖೀಸಿಲ್ಲ ಎಂದು ಹೇಳಿರುವ ಭವಾನಿ, ವಿಚಾರಣೆಗೆ ಹಾಜರಾದರೆ ಬಂಧಿಸುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಹಿನ್ನೆಲೆ
ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರಲ್ಲಿ ಭವಾನಿ ಪತಿ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಮೊದಲ ಆರೋಪಿ ಹಾಗೂ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ, ಎಸ್‌ಐಟಿ ನೋಟಿಸ್ ಜಾರಿ ಮಾಡಿದ್ದರೂ ಭವಾನಿ ಹಾಜರಾಗಿಲ್ಲ.
Related Articles
Advertisement