ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ಹೊಸ ಬೆದರಿಕೆ ಬಂದಿದೆ, ಈ ಹಿಂದೆ ಕೃಷ್ಣಮೃಗವನ್ನು ಕೊಂದ ಆರೋಪಕ್ಕೆ ಸಂಬಂಧಿಸಿ ಸಲ್ಮಾನ್ ಖಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ನೀಡಬೇಕು ಎಂದು ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಸೋಮವಾರ(ನ.4) ಮುಂಬೈ ನ ಸಂಚಾರಿ ಪೊಲೀಸರಿಗೆ ಬಂದಿರುವ ಕರೆಯಲ್ಲಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು ಅದರಲ್ಲಿ ಸಲ್ಮಾನ್ ಖಾನ್ ಜೀವಂತ ಉಳಿಯಬೇಕಾದರೆ ದೇವಸ್ಥಾನಕ್ಕೆ ಹೋಗಿ ನನ್ನಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಬೇಕು ಅಥವಾ ಐದು ಕೋಟಿ ಕೊಡಬೇಕು ಇಲ್ಲವಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಕಳೆದ ಹತ್ತು ದಿನಗಳಲ್ಲಿ ನಟನಿಗೆ ಬಂದಿರುವ ಮೂರನೇ ಬೆದರಿಕೆಯಾಗಿದೆ.
ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿದಿದ್ದು, ಸಂದೇಶ ಕಳುಹಿಸಿದವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆಯ ನಂತರ ನಟನ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸಲ್ಮಾನ್ ಖಾನ್ ಮತ್ತು ಎನ್‌ಸಿಪಿ ಶಾಸಕ ಬಾಬಾ ಸಿದ್ದಿಕ್ ಅವರ ಪುತ್ರ ಜೀಶನ್ ಸಿದ್ದಿಕ್ ಅವರನ್ನು ಒಳಗೊಂಡ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 28 ರಂದು ನೋಯ್ಡಾದ ಸೆಕ್ಟರ್ 39 ರಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು ಇದಾದ ಬಳಿಕವೂ ಬೆದರಿಕೆ ಕರೆಗಳು ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ