ಹೈದರಾಬಾದ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕಾಗಿ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ತೆಲಂಗಾಣದಲ್ಲಿ 119 ಕ್ಷೇತ್ರಗಳಿಗೆ ಇಂದು ಮತದಾನ ಆರಂಭಗೊಂಡಿದ್ದು, ಇಂದು ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ ಈ ನಡುವೆ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರು ಬಂಜಾರ ಹಿಲ್ಸ್‌ನ ಡಿಎವಿ ಶಾಲೆಯ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ತಾನು ಮತ ಚಲಾಯಿಸಿದ್ದು ಎಲ್ಲರು ಬಿಆರ್ ಎಸ್ ಪಕ್ಷಕ್ಕೆ ಮತ ಹಾಕುವಂತೆ ಮತದರಲ್ಲಿ ಮನವಿಯನ್ನು ಮಾಡಿದ್ದಾರೆ.
ಕವಿತಾ ಅವರ ಈ ಹೇಳಿಕೆಗೆ ಬೇರೆ ಪಕ್ಕ್ಷದ ನಾಯಕರು ಹಾಗೂ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಅಲ್ಲದೆ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ಮಿಜೋರಾಂ 4 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಪೂರ್ಣಗೊಂಡಿದ್ದು, ಅಂತಿಮ ಕ್ಷೇತ್ರವಾದ ತೆಲಂಗಾಣದ ಎಲ್ಲಾ 119 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
5 ರಾಜ್ಯಗಳ ಮತಗಳ ಎಣಿಕೆ ಕಾರ್ಯ ಡಿಸೆಂಬರ್ 3 ರಂದು ನಡೆಯಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್, ಆಡಳಿತಾರೂಢ ಪಿಆರ್‌ಎಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಪಿಆರ್‌ಎಸ್ ಹ್ಯಾಟ್ರಿಕ್ ಗೆಲ್ಲುವ ನಿರೀಕ್ಷೆಯೂ ಹೊಂದಿದೆ ಎನ್ನಲಾಗಿದೆ.
ಇದನ್ನೂ ಓದಿ: Viral Video; ಹೆಲ್ಮೆಟ್ ನೊಳಗೆ ಅವತಿತ್ತು ಹಾವು; ಭಾರೀ ವೈರಲ್ ಆದ ವಿಡಿಯೋ