Advertisement

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪ: ಬಿಜೆಪಿ ನಾಯಕಿ ಬಂಧನ

10:37 AM Aug 31, 2022 | Team Udayavani |

ರಾಂಚಿ: ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಬಂಧಿಸಲಾಗಿದೆ.

Advertisement

ಸುನೀತಾ ಎಂದು ಗುರುತಿಸಲಾದ ಕೆಲಸದಾಳುವಿಗೆ ಸೀಮಾ ಟಾಯ್ಲೆಟ್ ಅನ್ನು ನಾಲಿಗೆಯಿಂದ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.  ಈ ಪ್ರಕರಣ ಬಯಲಿಗೆ ಬಂದ ಬಳಿಕ ಜಾರ್ಖಂಡ್ ಬಿಜೆಪಿ ಅವರನ್ನು ಅಮಾನತುಗೊಳಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು : ವ್ಯಾಪಕ ಭದ್ರತೆ, ನಗರದಲ್ಲಿ ಕಟ್ಟೆಚ್ಚರ

ಸೀಮಾ ಪಾತ್ರಾ ತನ್ನ ಮನೆ ಕೆಲಸದಾಕೆಗೆ ಕಿರುಕುಳ ನೀಡಿದ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ತನ್ನ ಗಮನಕ್ಕೆ ತೆಗೆದುಕೊಂಡಿದೆ. ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ, ಸಮಿತಿ ಜಾರ್ಖಂಡ್‌ನ ಡಿಜಿಪಿಗೆ ಪತ್ರ ಬರೆದಿದ್ದು, ಈ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next