Advertisement

ಸೆಪ್ಟೆಂಬರ್ 5 ರವರೆಗೆ ಮುರುಘಾ ಶರಣರು ಪೊಲೀಸ್ ಕಸ್ಟಡಿಗೆ

07:27 PM Sep 02, 2022 | Team Udayavani |

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ಶುಕ್ರವಾರ ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Advertisement

ಗುರುವಾರ ರಾತ್ರಿ ಬಂಧಿಸಿದ ನಂತರ ಜೈಲಿನಲ್ಲಿ ಶ್ರೀಗಳಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು.ಅವರನ್ನು ಶುಕ್ರವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರು ಐದು ದಿನಗಳ ಕಸ್ಟಡಿಗೆ ಕೋರಿದ್ದಾರೆ. ಕೇಸರಿ ಉಡುಪಿನ ಸುತ್ತಲೂ ಬಿಳಿ ಬಟ್ಟೆಯನ್ನು ಸುತ್ತಿಕೊಂಡ ಅವರನ್ನು ಗಾಲಿಕುರ್ಚಿಯಲ್ಲಿ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.

ಎದೆನೋವು ಎಂದು ದೂರಿದ ನಂತರ ಅವರನ್ನು ಕರೆದೊಯ್ಯಲಾದ ಆಸ್ಪತ್ರೆಯಿಂದ ಹಿಡಿದು, ದಾರಿಯುದ್ದಕ್ಕೂ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು.

ಮಠ ನಡೆಸುತ್ತಿರುವ ಶಾಲೆಯಲ್ಲಿ ಓದುತ್ತಿರುವ ಹಾಗೂ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿರುವ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೋಕ್ಸೊ ಕಾಯ್ದೆ ಯಡಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next