Advertisement

ಕೈ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಎಂ ಗೆ ದೂರು ನೀಡಿದ ಮಠಾಧೀಶರು

12:30 PM Jul 22, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ 50 ಕ್ಕೂ ಹೆಚ್ಚು ವಿವಿಧ ಮಠಾಧಿಶರು ದೂರು ನೀಡಿದ್ದಾರೆ.

Advertisement

ಬಂಜಾರ ಮಠ ಹಾಗೂ ವೀರಶೈವ ಮಠಾಧೀಶರು ದೂರು ನೀಡಿದ್ದು, ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪ್ರಿಯಾಂಕ್ ಖರ್ಗೆ ದಬ್ಬಾಳಿಕೆ ನಡೆಸುತ್ತಿದ್ದಾರೆ‌. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಹೇಳಿದ ಹಾಗೆ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕೇಳುತ್ತಿದ್ದಾರೆ. ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವಾರು ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. ಅವುಗಳನ್ನು ಕೂಡಲೇ ಕೇಸ್ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ರಮೇಶ್ ಕುಮಾರ್ ಗೆ ‘ಮಾಯಿಲ್ ಮರಾಠಿ’ ಎಂದು ನಿಂದಿಸಿದ ಸಚಿವ ಸುಧಾಕರ್

ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಬೇಕು ಎಂದು ಸಿಎಂಗೆ ಮಠಾಧೀಶರು ಮನವಿ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next