Advertisement

ಯೂಟ್ಯೂಬ್‌ನಲ್ಲಿ ಸೀತಾರಾಮ ಕಲ್ಯಾಣ ಚಿತ್ರ ಬಿಡುಗಡೆ: ಎಫ್ಐಆರ್‌ 

06:06 AM Feb 08, 2019 | Team Udayavani |

ಬೆಂಗಳೂರು: ನಿಖಿಲ್‌ ಕುಮಾರಸ್ವಾಮಿ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರವನ್ನು ಥಿಯೇಟರ್‌ಗಳಲ್ಲಿ ಕ್ಯಾಮೆರಾದಿಂದ ರೆಕಾರ್ಡ್‌ ಮಾಡಿಕೊಂಡು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲಿ  ಬಿಡುಗಡೆ ಮಾಡಿರುವ ಆರೋಪ ಸಂಬಂಧ ಇಬ್ಬರ ವಿರುದ್ಧ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

Advertisement

ಚೆನ್ನಾಂಬಿಕ ಫಿಲಂ ಮುಖ್ಯಸ್ಥೆ , ಶಾಸಕಿ ಅನಿತಾ ಕುಮಾರಸ್ವಾಮಿ, ಕಿಡಿಗೇಡಿಗಳು “ಸೀತಾರಾಮ ಕಲ್ಯಾಣ’ ಚಿತ್ರವನ್ನು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ಗಳಲ್ಲಿ ಬಿಡುಗಡೆಗೊಳಿಸಿದ್ದಾರೆ. ಇದರಿಂದ ಚಿತ್ರದ ನಿಮಾರ್ಪಕರಿಗೆ ನಷ್ಟ ಉಂಟಾಗಿದ್ದು, ಅಂತಹ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ದೂರು ನೀಡಿದ್ದರು.

ಈ ದೂರಿನ ಅನ್ವಯ  ಟಿ.ಎಸ್‌.ಶಶಿಧರ್‌ ಹಾಗೂ ಮತ್ತೂಬ್ಬ ಆರೋಪಿ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿತ್ರ ಜ.25ರಂದು ಬಿಡುಗಡೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next