Advertisement

ಜ. 25ಕ್ಕೆ ಸೀತಾರಾಮ ಕಲ್ಯಾಣ ತೆರೆಗೆ

03:30 PM Dec 27, 2018 | Sharanya Alva |

ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಸುದ್ದಿ ಮಾಡುತ್ತಿರುವ ನಟ ನಿಖಿಲ್ ಕುಮಾರ್‌ ಅಭಿನಯದ ಎರಡನೇ ಚಿತ್ರ “ಸೀತಾರಾಮ ಕಲ್ಯಾಣ’ ತೆರೆಗೆ ಬರೋದಕ್ಕೆ ಅಂತೂ ಮುಹೂರ್ತ ನಿಗದಿಯಾಗಿದೆ. ಸದ್ಯ ಚಿತ್ರದ ಅಂತಿಮ ಹಂತದ ಪ್ರಮೋಷನ್‌ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಮುಂಬರುವ ಜನವರಿ. 25ರಂದು “ಸೀತಾರಾಮ ಕಲ್ಯಾಣ’ವನ್ನು ತೆರೆಗೆ ತರುವುದಾಗಿ ಘೋಷಿಸಿದೆ.

Advertisement

“ಸೀತಾರಾಮ ಕಲ್ಯಾಣ’ ಚಿತ್ರದಲ್ಲಿ ನಟ ನಿಖಿಲ್ ಕುಮಾರ್‌ ಅವರಿಗೆ ನಾಯಕಿಯಾಗಿ ರಚಿತಾ ರಾಮ್‌ ಜೋಡಿಯಾಗಿದ್ದಾರೆ. ಉಳಿದಂತೆ ಬಹುಭಾಷಾ ನಟ ಶರತ್‌ ಕುಮಾರ್‌, ರವಿಶಂಕರ್‌, ಮಧುಬಾಲಾ, ಗಿರಿಜಾ ಲೋಕೇಶ್‌, ಜ್ಯೋತಿ ರೈ ಮೊದಲಾದ ಕಲಾವಿದರ ಬೃಹತ್‌ ತಾರಾಗಣವೇ ಚಿತ್ರದಲ್ಲಿದೆ. ಚೆನ್ನಾಂಬಿಕಾ ಫಿಲಂಸ್‌ ಬ್ಯಾನರ್‌ನಲ್ಲಿ ಅನಿತಾ ಕುಮಾರಸ್ವಾಮಿ ನಿರ್ಮಿಸುತ್ತಿರುವ “ಸೀತಾರಾಮ ಕಲ್ಯಾಣ’ ಚಿತ್ರಕ್ಕೆ ಎ. ಹರ್ಷ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. 

ಈಗಾಗಲೇ ಬಿಡುಗಡೆಯಾಗಿರುವ “ಸೀತಾರಾಮ ಕಲ್ಯಾಣ’ ಚಿತ್ರದ ಟ್ರೇಲರ್‌ ಮತ್ತು ಹಾಡುಗಳಿಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಚಿತ್ರ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಎಂಬುದು ಚಿತ್ರ ಬಿಡುಗಡೆಯಾದ ಮೇಲಷ್ಟೆ ಗೊತ್ತಾಗಲಿದೆ. 

Advertisement

Udayavani is now on Telegram. Click here to join our channel and stay updated with the latest news.

Next