ಬೆಳಗಾವಿ: ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಕೇಂದ್ರ ಪುರಸ್ಕೃತ ಶ್ಯಾಮಪ್ರಸಾದ ಮುಖರ್ಜಿ ರಾಷ್ಟ್ರೀಯ ರುರ್ಬನ್ ಮಿಷನ್ ಯೋಜನೆಗೆ ಬೆಳಗಾವಿ ಜಿಲ್ಲೆಯ ಕಂಗ್ರಾಳಿ ಕ್ಲಸ್ಟರ್ ಆಯ್ಕೆಯಾಗಿದೆ ಎಂದು ಜಿಪಂ ಸಿಇಒ ರಾಮಚಂದ್ರನ್ ಆರ್. ತಿಳಿಸಿದರು. ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ನಡೆದ ಶ್ಯಾಮ ಪ್ರಸಾದ ಮುಖರ್ಜಿ ರಾಷ್ಟ್ರೀಯ ರುರ್ಬನ್ ಮಿಶನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಂಗ್ರಾಳಿ ಬಿಕೆ, ಕಂಗ್ರಾಳಿ ಕೆಎಚ್, ಮಂಡೋಳಿ, ಅಂಬೇವಾಡಿ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗೆ 11691 ಲಕ್ಷ ರೂ. ಸಮಗ್ರ ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು, ಡಿಪಿಆರ್ ಅನುಮೋದನೆ ಯಾಗುತ್ತಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಈ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಯೋಜನೆಯು ಗ್ರಾಮೀಣ ಜೀವನ ಮಟ್ಟ ಹೆಚ್ಚಿಸಿ ಪಟ್ಟಣದ ಎಲ್ಲ ಆಧುನಿಕ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ ಬೆಳಗಾವಿ, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೋಜನೆಯನ್ನು
ಅನುಷ್ಠಾನ ಗೊಳಿಸಲಾಗುತ್ತಿದೆ ಎಂದರು.
ಆಯ್ಕೆಯಾದ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗಾಗಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಹ ಫಲಾನುಭವಿಗಳ ಆಯ್ಕೆ, ಕಾಮನ್ ಸರ್ವಿಸ್ ಸೆಂಟರ್‌ಗಳ ಸೂಕ್ತ ನಿರ್ವಹಣೆ, ಕುಡಿಯುವ ನೀರು, ರಸ್ತೆ, ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಯೋಜನಾ ನಿರ್ದೇಶಕರು ಜಿಪಂ, ಕೃಷಿ, ತೋಟಗಾರಿಕೆ, ಪಿಎಂಜಿಎಸ್ ವೈ, ಕೈಗಾರಿಕಾ ಹಾಗೂ ವಾಣಿಜ್ಯ ಕೇಂದ್ರ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಪಂ ಇಒಗಳು ಇದ್ದರು.