Advertisement
ಕೃಷಿ ವಿಮೆಯ ಹೆಸರಲ್ಲಿ ಉಂಟಾಗುತ್ತಿರುವ ವಂಚನೆ ತಪ್ಪಿಸಲು ಈ ನಿರ್ಧಾರ ಸಹಕಾರಿಯಾಗಲಿದೆ ಎಂದು ಸಂಪುಟ ಸಭೆಯ ಬಳಿಕ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದರು. ಸದ್ಯ ಶೇ.58ರಷ್ಟು ಮಂದಿ ಈ ಯೋಜನೆಯ ವ್ಯಾಪ್ತಿಯಲ್ಲಿದ್ದಾರೆ. ಇದುವರೆಗೆ 60 ಸಾವಿರ ಕೋಟಿ ರೂ. ಮೌಲ್ಯದ ಕ್ಲೇಮುಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು ಸಿಂಗ್.
ಮತ್ತೂಂದು ಮಹತ್ವದ ನಿರ್ಣಯ ದಲ್ಲಿ ಕೇಂದ್ರ ಸಂಪುಟ ಹೈನುಗಾರಿಕೆ ಕ್ಷೇತ್ರಕ್ಕೆ 4,558 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಿದೆ. ಇದರಿಂದಾಗಿ ದೇಶದಲ್ಲಿನ 95 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಮತ್ತೂಂದು ಪ್ರಮುಖ ನಿರ್ಧಾರದಲ್ಲಿ ಬಡ್ಡಿ ವಿನಾಯಿತಿ ಪ್ರಮಾಣವನ್ನು ಶೇ.2ರಿಂದ ಶೇ.2.5ಕ್ಕೆ ಪರಿಷ್ಕರಿಸುವ ಬಗ್ಗೆಯೂ ನಿರ್ಧರಿಸಲಾಗಿದೆ.