Advertisement

Guest Lecturer: ಅತಿಥಿ ಉಪನ್ಯಾಸಕರ ಆಯ್ಕೆ: ಇಂದಿನಿಂದ ಆನ್‌ಲೈನ್‌ನಲ್ಲಿ ಅರ್ಜಿ

08:51 PM Aug 24, 2023 | Team Udayavani |

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆ ಸಂಬಂಧ ಆ.25ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

Advertisement

2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಸೇರಿ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಕೆಯಾಗಿರುವ ಬೋಧನಾ ಕಾರ್ಯ ಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಒಳಗೊಂಡಂತೆ) ಆನ್‌ಲೈನ್‌ ಕೌನ್ಸೆಲಿಂಗ್‌ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು.

ಅರ್ಜಿ ಸಲ್ಲಿಸಲು ಸೆ.2 ಕೊನೆಯ ದಿನ. ಸೆ.4ರಂದು ರಾಜ್ಯವ್ಯಾಪಿ ಮೆರಿಟ್‌ ಪಟ್ಟಿ ಪ್ರಕಟಿಸಲಾಗುವುದು. ಸೆ.8ರಂದು ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಸೆ.11ರಿಂದ 15ರ ವರೆಗೆ ಮೆರಿಟ್‌ ಪಟ್ಟಿ ಅನ್ವಯ ಕಾಲೇಜು ಆಯ್ಕೆ ಕೌನ್ಸೆಲಿಂಗ್‌ ನಡೆಸಲಾಗುವುದು. ಸೆ.16ರಂದು ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next