Advertisement

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

10:54 AM Oct 21, 2021 | Team Udayavani |

ಹುಬ್ಬಳ್ಳಿ: ಸುರಕ್ಷತೆಯ ದೃಷ್ಟಿಯಿಂದ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ‌ಮಾತನಾಡಿದ‌ ಅವರು, ಸ್ವಯಂ ಸುರಕ್ಷತೆಗೆ ತರಬೇತಿ ನೀಡುವ ಕೆಲಸ ಕೆಎಸ್ಆರ್ ಪಿಗೆ ವಹಿಸಲಾಗುವುದು. ಪೊಲೀಸ್ ತರಬೇತಿ ಶಾಲೆಗಳಲ್ಲಿ ಕೆಲಸ ಮಾಡಿದ ನಿವೃತ್ತ ಪ್ರಾಂಶುಪಾಲರನ್ನು ತರಬೇತಿ‌ ನೀಡಲು ಬಳಸಿಕೊಳ್ಳಲಾಗುವುದು ಎಂದರು.

ಕೇರಳ ಹಾಗೂ ಉತ್ತರಾಖಂಡದಲ್ಲಿ ಉಂಟಾದ ಭೂ ಕುಸಿತ ಘಟನೆ ಕುರಿತು ಕೇರಳ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ಅಗತ್ಯ ನೆರವು‌ ನೀಡುವುದಾಗಿಯೂ ತಿಳಿಸಿದ್ದೇನೆ. ಉತ್ತರಾಖಂಡದಲ್ಲಿ ಸಿಲುಕಿರುವ ಕರ್ನಾಟಕದವರ ರಕ್ಷಣೆಗಾಗಿ ಕ್ರಮ‌ಕೈಗೊಳ್ಳಲಾಗಿದೆ. ತುಷಾರ್ ಗಿರಿನಾಥ್ ಅವರನ್ನು ನೋಡಲ್ ಅಧಿಕಾರಿಯಾಗಿ‌ ನೇಮಿಸಲಾಗಿದೆ ಎಂದರು.

ಇದನ್ನೂ ಓದಿ:ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?

ಉಪಚುನಾವಣೆ ಪ್ರಚಾರದಲ್ಲಿ ವೈಯಕ್ತಿಕ ನಿಂದನೆಗಳ ಬಗ್ಗೆ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಚುನಾವಣೆ ಜನರ ಧ್ವನಿಯಾಗಬೇಕು. ಜನರ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸೀಮಿತರಾದರೆ ಜನಪ್ರತಿನಿಧಿಗಳಿಗೆ ಒಳ್ಳೆಯದು. ಜನರ ಮನಸ್ಸು ಗೆಲ್ಲುವ ಮಾತಗಳನ್ನಾಡಬೇಕೆ ಹೊರತು ಇನ್ನೊಬ್ಬರನ್ನು ನಿಂದಿಸುವ ಕೆಲಸ ಮಾಡಬಾರದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next